



ಉಡುಪಿ: ಕನ್ನರ್ಪಾಡಿ ಶ್ರೀ ಜಯ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕುಂಭಾಭಿಷೇಕದ ಅಂಗವಾಗಿ ಪುತ್ತೂರು ವೇ.ಮೂ. ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಕೋಟಿ ಕುಂಕುಮಾರ್ಚನೆ ಸೇವೆಯ ಮಂಗಲೋತ್ಸವವು ನೆರವೇರಿತು.
ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಅಧಿಕ ಭಕ್ತರು ಹಾಲು ಪಾಯಸ ಸಹಿತ ಅನ್ನಪ್ರಸಾದ ಸ್ವೀಕರಿಸಿದ್ದು, ಸಂಜೆ ಧಾರ್ಮಿಕ ಸಭೆ ನಡೆಯಿತು.
ಮಧ್ಯಾಹ್ನ ಭಕ್ತಿ ಸಂಗೀತ, ಸಂಜೆ ತಾಳಮದ್ದಲೆ, ರಾತ್ರಿ ತುಳು ನಾಟಕ ಪ್ರದರ್ಶನ ಜರಗಿತು.
ದೇಗುಲದ ಆಡಳಿತಾಧಿಕಾರಿ ಡಾ. ರೋಶನ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್. ಮುರಳೀಧರ ಬಲ್ಲಾಳ್, ಕೋಶಾಧಿಕಾರಿ ಕೆ. ಕೃಷ್ಣಮೂರ್ತಿ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸಂಜೀವ ಎ., ಅರ್ಚಕ ಗುರುರಾಜ ಉಪಾಧ್ಯಾಯ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ನಾರಾಯಣರಾವ್, ಕನ್ನರ್ಪಾಡಿ - ಕಿನ್ನಿಮೂಲ್ಕಿ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸುರೇಶ್ ರಾವ್, ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಆಚಾರ್ಯ, ಕಡೆಕಾರು ಗ್ರಾಂ.ಪಂ. ಉಪಾಧ್ಯಕ್ಷ ನವೀನ್ ಶೆಟ್ಟಿ, ನಿರುಪಮಾ ಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.