logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

‘ಕಾಂತಾರ ಚಾಪ್ಟರ್​​ 1’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್..!

ಟ್ರೆಂಡಿಂಗ್
share whatsappshare facebookshare telegram
7 Sept 2025
post image

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಿಷಭ್​​ ಶೆಟ್ಟಿ ನಟಿಸಿ ನಿರ್ದೇಶಿಸುವ ಸಿನಿಮಾ ಕಾಂತಾರ ಚಾಪ್ಟರ್​​ 1 ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ತಂಡ ಈ ಕುರಿತಾಗಿ ಇಂಟ್ರಸ್ಟಿಂಗ್​ ಮಾಹಿತಿಯನ್ನು ಹಂಚಿಕೊಂಡಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು, ಹೊಸ ಅಪ್ಡೇಟ್ ಸದ್ಯದಲ್ಲೇ ಕೊಡಲಾಗುವುದು ಎಂದು ಹೊಂಬಾಳೆ ಫಿಲಂನವರು ಹೇಳಿದ್ದಾರೆ.

ಕಾಂತಾರ-1′ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಗುಲ್ಷನ್ ದೇವಯ್ಯ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಸಾವಿರಾರು ಸಹ ಕಲಾವಿದರನ್ನು ಬಳಸಿಕೊಂಡು ಚಿತ್ರದ ಕೆಲ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಅಕ್ಟೋಬರ್ 2 ಗಾಂಧೀ ಜಯಂತಿಯಂದು ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದ್ದು ಚಿತ್ರತಂಡ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಗಾಂಧಿ ಜಯಂತಿಯಂದು ಸರ್ಕಾರಿ ರಜೆ ಇರುವುದರಿಂದ ಕಾಂತಾರ ಸಿನಿಮಾಕ್ಕೆ ಬಿಗ್ ಅಡ್ವಂಟೇಜ್ ಆಗುವ ಸಾಧ್ಯತೆ ಇದೆ. ಅಕ್ಟೋಬರ್ 2 ಗುರುವಾರದ ಆದರೆ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಥಿಯೇಟರ್​ಗಳು ಸಮಾನ್ಯವಾಗಿ ಹೌಸ್​ ಫುಲ್ ಆಗೋದು ಪಕ್ಕಾ. ಹೀಗಾಗಿ ಹೊಂಬಾಳೆ ಫಿಲಂ ದೊಡ್ಡ ಲಾಭದ ನಿರೀಕ್ಷೆಯಲ್ಲಿದೆ. ರುಕ್ಮಿಣಿ ವಸಂತ್‌ ಕನಕವತಿ ಪಾತ್ರದಲ್ಲಿ ಮಿಂಚಿದ್ದಾರೆ. ಹೊಂಬಾಳೆ ಫಿಲಂ ಈ ಪ್ಯಾನ್​ ಇಂಡಿಯಾ ಸಿನಿಮಾಕ್ಕೆ ಬಂಡವಾಳ ಹೂಡಿಕೆ ಮಾಡಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಒಟ್ಟು 7 ಭಾಷೆಗಳಲ್ಲಿ ರಿಲೀಸ್​ ಆಗಲಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.