logo
WhatsApp Image 2026-04-02 at 14.46.04.jpeg
hindalco everlast.jpeg

ಕಾಂತಾವರ: ಮನೆಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ನಷ್ಟ

ಟ್ರೆಂಡಿಂಗ್
share whatsappshare facebookshare telegram
19 Nov 2022
post image

ಕಾರ್ಕಳ:

ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾಂತಾವರ ಗ್ರಾಮದ ದಿ. ನೋನಯ್ಯ ಎಂಬವರ ಮನೆಯಲ್ಲಿ ಅವರ ಸಹೋದರಿ ಮತ್ತು ಮಕ್ಕಳೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಅವರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆ ಸಂಪೂರ್ಣ ಭಸ್ಮವಾಗಿದೆ. ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಹೋಗಿವೆ. ಕಾಂತಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಮೂಲ್ಯ, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ್ ಅವರು ಸ್ಥಳಕ್ಕೆ ಭೇಟಿ‌ಪರಿಶೀಲನೆ ನಡೆಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.