logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ, ಕಾರು ಚಾಲಕ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
29 Feb 2024
post image

ಉಡುಪಿ: ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಭಾರತ್ ನಗರ ನಿವಾಸಿ ನಾಗೇಶ್ ಕಾಮತ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಎಇಇ ಅವರನ್ನು ಮನೆಗೆ ಬಿಟ್ಟು ಕಾಪು ಕಡೆಗೆ ಆಗಮಿಸುತ್ತಿದ್ದಾಗ ಪಾಂಗಾಳದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕೆಟ್ಟು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದಾಗಿ ಕೆಲವು ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಕಬ್ಬಿಣದ ರಾಡ್ ಬಳಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.