



ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪು ಇಲ್ಲಿ ನೆರವೇರಿತು.
ಬಳಿಕ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಪ್ರಕಟಿಸಿದರು. ಪ್ರಕಟಣೆ ಬಳಿಕ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆ ಕೊಟ್ಟು, ನಾವೆಲ್ಲರೂ ಕಾಪು ಕ್ಷೇತ್ರವನ್ನು ರಾಜ್ಯದ ನಂಬರ್ 1 ಕ್ಷೇತ್ರವನ್ನಾಗಿ ಮಾಡೋಣ ಎಂದು ಹೇಳಿದರು.
ಈ ಸಂಧರ್ಭ ಕಾಪು ವಿಧಾನಸಭಾ ಶಾಸಕರಾದ ಲಾಲಾಜಿ ಮೆಂಡನ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ದೆಹಲಿ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದ್ರ ಗುಪ್ತ, ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಬಂಟ್ವಾಳ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಕ್ಷೇತ್ರ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾದ ಉಪೇಂದ್ರ ನಾಯಕ್, ಕೇಸರಿ ಯುವರಾಜ್, ಕಾಪು ಕ್ಷೇತ್ರ ಮಾಧ್ಯಮ ಸಂಯೋಜಕರಾದ ಕಿರಣ್ ಆಳ್ವ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೆಲ್ಲರೂ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.