



ಕಾಪು: ಡಿ. 18: ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ಆತನಿಗೆ ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯ ಜೊತೆಗೆ ನಾಲ್ವರು ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ನಾಪತ್ತೆಯಾಗಿದ್ದಳು ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಪುತ್ರಿ ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಮರ್ಯಾದೆಗೆ ಅಂಜಿ ಮನನೊಂದು ರೂಮ್ ನ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು.
ನಾಪತ್ತೆ ಪ್ರಕರಣ ಭೇದಿಸಲು ಪೊಲೀಸರು ತಂಡಗಳನ್ನು ರಚಿಸಿದ್ದು ಅದರಂತೆ ಸಾಕು ಮಗಳನ್ನು ಪತ್ತೆಹಚ್ಚುವುದರೊಂದಿಗೆ. ಆರೋಪಿಗಳನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.