logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
23 Dec 2021
post image

ಕಾಪು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಮೂಡಬೆಟ್ಟು ಗ್ರಾಮದ ಸರಕಾರಿ ಗುಡ್ಡೆಯ ನಿವಾಸಿ 42 ವರ್ಷದ ರವಿ ಮೃತ ದುರ್ದೈವಿ. ಇವರು ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಮದುವೆ ಕೂಡ ಆಗಿರಲಿಲ್ಲ. ಇದೇ ವಿಚಾರದಲ್ಲಿ  ಜೀವನದಲ್ಲಿ ಮನನೊಂದು ಡಿಸೆಂಬರ್ 16ರಂದು ಬಿಯರ್‌ನಲ್ಲಿ ಇಲಿ ಪಾಷಾಣ ಸೇರಿಸಿ ಕುಡಿದಿದ್ದರು. ಬಳಿಕ ಮನೆಗೆ ಬಂದ ರವಿ ವಾಂತಿ ಮಾಡಿದ್ದು, ಇದನ್ನು ಗಮನಿಸಿದ ಮನೆಯವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿ ಚಿಕಿತ್ಸೆ ಫಲಿಸದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ‌. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.