logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಅತಿವೇಗದಿಂದ ಬರುತ್ತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
29 Jul 2024
post image

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ಅವರ ಪುತ್ರ ನಿಜಾಮ್ (22) ಎಂದು ಗುರುತಿಸಲಾಗಿದೆ. ನಿಜಾಮ್ ಅವರು ಸಾಣೂರಿನಿಂದ ತನ್ನ ಕೆಲಸಕ್ಕೆಂದು ಬೆಳಿಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದರು‌‌. ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ ಟೆಕ್ ಮಾಡುವ ಭರದಲ್ಲಿ ಎದುರಿನಿಂದ ಅತಿವೇಗದಿಂದ ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಟಿಪ್ಪರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.