



ಕಾರ್ಕಳ, : ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ನೆಲ್ಲದ ಬೆಟ್ಟು ನಿವಾಸಿ ಪ್ರವೀಣ (26) ಎಂಬ ವ್ಯಕ್ತಿಯು ಮೇ 04 ರಂದು ಮಧ್ಯಾಹ್ನ 2.30 ರ ಸುಮಾರಿಗೆ ಮನೆಯಿಂದ ತೆರಳಿದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 165 ಸೆಂ. ಮೀ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂ.ಸಂಖ್ಯೆ: 08258-231083, ಮೊ.ನಂ. 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂ.ಸಂಖ್ಯೆ:08258-232083, 233100, ಮೊ.ನಂ: 9480805462, ಅನ್ನು ಸಂಪರ್ಕಿಸುವAತೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.