



ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪದ್ಮನಾಭ ನಗರ, ಸೋಮರಾಜ್ (೪೫) ರವರು ಎಂಬುವವರು ಬೆಳುವಾಯಿಯ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು , ವಿಪರೀತ ಮದ್ಯಪಾನ ಮಾಡುತಿದ್ದರ ಪರಿಣಾಮ ಅನಾರೋಗ್ಯದ ಕಾರಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಲಾಗಿತ್ತು .ಡಿ.೫ ರಂದು ಮದ್ಯಾಹ್ನ ಆಸ್ಪತ್ರೆಯಿಂದ ಮನೆಗೆ ಹೋಗಲು ಕಾರ್ಕಳ ಬಸ್ ನಿಲ್ದಾಣದಲ್ಲಿ ಕುಳಿತವರು ನಾಪತ್ತೆಯಾಗಿದ್ದರು . ಡಿ. ೬ಮುರತ್ತಂಗಡಿ ಬಸ್ ನಿಲ್ದಾಣದ ಬಳಿಯ ಅಂಗಡಿಯ ಎದುರು ಮಲಗಿದಲ್ಲಿಯೇ ಮೃತಪಟ್ಟಿದ್ದಾರೆ ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.