logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
22 Jun 2024
post image

ಕಾರ್ಕಳ: ಕಾರ್ಕಳ ಶ್ರೀದೇವಿ ಕಾಲೋನಿ ಹತ್ತಿರ ಅಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ನಿವಾಸಿ ಶಂಕರ (50) ಎಂದು ಗುರುತಿಸಲಾಗಿದೆ.

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಜೂ.19ರಂದು ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ತೆಂಗಿನಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜೂ.21ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.