



ಕಾರ್ಕಳ: ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಬೋಳ ಗ್ರಾಮದ ಬಲ್ಯಾರ್ ದಡ್ಡು ಎಂಬಲ್ಲಿ ನಡೆದಿದೆ . ಸುರೇಶ್ ಶೆಟ್ಟಿ (೫೨) ಆತ್ಮಹತ್ಯೆ ಶರಣಾದವರು . ಸುರೇಶ್ ಶೆಟ್ಟಿ ಬಿ.ಪಿ ಹಾಗೂ ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದವರು , ಅನಾರೋಗ್ಯದ ಹಿನ್ನೆಲೆಯಲ್ಲಿ ಮದ್ಯಪಾನವನ್ನು ಬಿಟ್ಟಿದ್ದ ಕಾರಣ ಮಾನಸಿಕ ಖಿನ್ನತೆಯಿಂದ ಬಳಲುತಿದ್ದರು. ಮಾನಸಿಕವಾಗಿ ಮನನೊಂದು ತಮ್ಮ ಕೊಟ್ಟಿಗೆಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.