



ಕಾರ್ಕಳ: ರಾಷ್ಟ್ರೀಯ ಹೆದ್ದಾರಿ ನಿಟ್ಟೆ ಮಂಜರಪಲ್ಕೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಜೀಪು ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಹಲವು ಗಂಭೀರವಾಗಿ ಗಾಯಗೊಂಡು, ಓರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಕಾರ್ಕಳದಿ೦ದ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ಡಿಕ್ಕಿ ಹೊಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ 48 ವರ್ಷದ ಶಿವಪ್ಪ ಸ್ಥಳದಲ್ಲೇ ಮೃತಪಟ್ಟರೆ, 45 ವರ್ಷದ ಮಂಜು , 28 ವರ್ಷದ ಸುಜಯರವರ ಸ್ಥಿತಿ ಗಂಭೀರ ವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಭಾನುವಾರ ಬೆಳಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ಹಿಂದಿರುವ ಸಂದರ್ಭ ಈ ಘಟನೆ ಸಂಭವಿಸಿದೆ.
ಘಟನೆ ನಡೆದ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಬಸ್ ನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.