logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಮುಖ್ಯಪೇದೆ ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
16 Jul 2023
post image

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಗಿದ್ದು ಕೆಲ ದಿನಗಳ ಹಿಂದಷ್ಟೇ ಕಾರ್ಕಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು,ಕರ್ತವ್ಯಕ್ಕೆ ಹಾಜರಾಗದೇ ರಜೆಯಲ್ಲಿದ್ದರು. ಅವಿವಾಹಿತರಾಗಿದ್ದ ಪ್ರಶಾಂತ್ ಮಧುಮೇಹ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.