



ಕಾರ್ಕಳ : ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ಪಾವತಿಸಲು ನಿಂತಿದ್ದ ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೈದು ಪರಾರಿಯಾಗುತ್ತಿದ್ದ ಮೂವರು ಮಹಿಳೆ ಯರನ್ನು ಸಾರ್ವಜನಿಕರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಈ ಮಹಿಳೆಯರು ತಮಿಳುನಾಡಿನ ಮೂಲದ ವರೆಂದು ತಿಳಿದುಬಂದಿದೆ. ವೃದ್ಧೆ ಬಿಲ್ ಪಾವತಿಸಲು ಸರದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಅವರ ಹಿಂಬದಿಯಲ್ಲಿ ಮೂವರು ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆಗ ವೃದ್ಧೆ ಬೊಬ್ಬೆ ಹಾಕಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಸುಲಿಗೆಕೋರರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕಾರ್ಕಳ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರ ಸರ ಕಳ್ಳತನ ನಡೆದಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.