logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಜೆಸಿಬಿ ಯಡಿ ಸಿಲುಕಿದ ಬೈಕ್ .ಸವಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
4 Apr 2022
post image

ಕಾರ್ಕಳ; ಮೂಡಬಿದ್ರಿ-ಕಾರ್ಕಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೆಸಿಬಿಯಡಿಯಲ್ಲಿ ಸಿಲುಕಿ ಬೈಕ್ ಸವಾರ ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಇರ್ವತ್ತೂರಿನ ಅವಿನಾಶ್(27) ಘಟನೆಯಲ್ಲಿ ಮೃತಪಟ್ಟ ಯುವಕ

ವೃತ್ತಿಯಲ್ಲಿ ಪೈಂಟರ್ ಆಗಿರುವ ಅವಿನಾಶ್ ಪೈಟಿಂಗ್ ಕೆಲಸ ಮುಗಿಸಿ ಮನೆಯ ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹದ ಭಾಗ ಛಿದ್ರಗೊಂಡಿದ್ದು, ಹೊಟ್ಟೆಯ ಭಾಗದಿಂದ ಕರಳು ಹೊರ ಬಿದ್ದಿದೆ.

ಕಾರ್ಕಳ ನಗರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೆಸಿಬಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿರುವ ಮಾಹಿತಿ ಲಭಿಸಿದೆ. ಅದೇ ಕಾರಣದಿಂದ ಜೆಸಿಬಿ ತೆರವು ಕಾರ್ಯ ಒಂದಿಷ್ಟು ಹೊತ್ತು ವಿಳಂಬವಾಗಿತ್ತಾದರೂ, ಬದಲಿ ಚಾಲಕನ ಸಹಕಾರದಿಂದ ಜೆಸಿಬಿಯನ್ನು ತೆರವುಗೊಳಿಸಿ ಮೃತದೇಹವನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.