logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಲಾರಿ ಢಿಕ್ಕಿ ಬೈಕ್ ಸವಾರ ಸಾವು

ಟ್ರೆಂಡಿಂಗ್
share whatsappshare facebookshare telegram
4 Sept 2022
post image

ಕಾರ್ಕಳ: ಲಾರಿ ಢಿಕ್ಕಿ ಬೈಕ್ ಸವಾರ ಸಾವು ಕಾರ್ಕಳ : ಬೈಕಿಗೆ ಲಾರಿಯೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಕುಕ್ಕುಂದೂರು ಗ್ರಾಮದ ಬೋಪಾಡಿ ಎಂಬಲ್ಲಿ ಸೆ. 3 ರಂದು ನಡೆದಿದೆ.

ಬೈಕ್ ಸವಾರ ಸಲ್ಮಾನ್ ಮೃತಪಟ್ಟವರು . ಸಲ್ಮಾನ್ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ರಂಗನಪಲ್ಕೆ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಚಾಲಕ ಸಿದ್ಧಿಕ್ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಕಾರ್ಕಳ ಕಡೆಗೆ ಹೋಗುತ್ತಿದ್ದ ಹೋಂಡಾ ಬೈಕ್ ಗೆ ಡಿಕ್ಕಿ ಹೊಡೆಡಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಲ್ಮಾನ್ ಬೈಕ್ ಸಹಿತ ರಸ್ತೆಗೆ ಬಿದ್ದಿದ್ದು, ಅಪಘಾತದ ರಭಸಕ್ಕೆ ತಲೆಯಲ್ಲಿ ಇದ್ದ ಹೆಲ್ಮಟ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.