



ಕಾರ್ಕಳ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.
ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.