



ಕಾರ್ಕಳ: ವೇಗವಾಗಿ ಸಾಗುತಿದ್ದ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ಜನವರಿ 1 ಬೆಳಗ್ಗೆ ನಡೆದಿದೆ. ಅಜೆಕಾರಿನ ವ್ಯಕ್ತಿ ಯೋರ್ವರಿಗೆ ಸೇರಿದ ಕಾರಾಗಿದ್ದು ಬೆಂಗಳೂರಿನಿಂದ ಕೆರುವಾಶೆಯ ಮೂಲಕ ಅಜೆಕಾರಿಗೆ ಸಾಗುತಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ತೀವ್ರ ವಾದ ಗಾಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಾಣಹಾನಿ ಸಂಭವಿಸಿಲ್ಲ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.