


ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಹಾಗೂ ಪದವಿ ಪೂರ್ವ ವಸತಿ ಸಹಿತ ಕಾಲೇಜು, ಮಿಯಾರು ಇವರ ಜಂಟಿ ಆಶ್ರಯದಲ್ಲಿ ನ. 13ರಂದು ಕಾಲೇಜಿನಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳದ ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಿರುವ ಕಮಲಾಕ್ಷ ಕಾಮತ್ ಅವರು ವಿದ್ಯಾರ್ಥಿ ಜೀವನದ ಮಹತ್ವ ಹಾಗೂ ಶಿಸ್ತಿನ ಕುರಿತು ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ರೊ. ಮಂಜುನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉದಯೋನ್ಮುಖ ಉದ್ಯಮಿ ಪ್ರವೀಣ್ ಕುಮಾರ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಅವರು ತಮ್ಮ ಉದ್ಯಮದ ಯಶಸ್ಸಿನ ಹಾದಿಯ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಸಂಸ್ಥೆಯ ಪ್ರಾಂಶುಪಾಲ ಮಲ್ಲಿಕಾರ್ಜುನ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಕ್ಲಬ್ ಮಾರ್ಗದರ್ಶಕ ಪಿಡಿಜಿ ಡಾ. ಭರತೇಶ್ ಆದಿರಾಜ್, ರೊ. ಉಪೇಂದ್ರ ವಾಗ್ಲೆ, ರೊ. ಶ್ರೀವರ್ಮ ಅಜ್ರಿ ಹಾಗೂ ರೊ. ಸುರೇಂದ್ರ ನಾಯಕ್ ಉಪಸ್ಥಿತರಿದ್ದರು.
ಇಂಟರಾಕ್ಟ್ ಕ್ಲಬ್‌ನ ಪ್ರಾಧ್ಯಾಪಕ ಸಂಚಾಲಕ ಪ್ರವೀಣ್ ಪೂಜಾರಿ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿಗಳು ಹಾಗೂ ರೋಟರಿ ಕ್ಲಬ್ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ರೊ. ಗಣೇಶ ಬರ್ಲಾಯ ವಂದನಾರ್ಪಣೆ ಸಲ್ಲಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.