



ಕಾರ್ಕಳ; : ಉಡುಪಿ ಅಪರ ಜಿಲ್ಲಾಧಿಕಾರಿ ಯಾಗಿದ್ದ ಎಳ್ಳಾರೆ ಸದಾಶಿವ ಪ್ರಭು ಅವರು ಐ ಎ ಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ದೇಶದ 75 ನೇ ಸ್ವತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ , 2005 ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಾತಿ ಹೊಂದಿದರು. 2006 ಬ್ಯಾಚ್ ನ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ ಕೆ.ಎ.ಎಸ್ ಸೇವೆಗೆ ಸೇರ್ಪಡೆಗೊಂಡರು.
ಬಿಜಾಪುರ ದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಯಾಗಿ ಕರ್ತವ್ಯ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.