logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಟ್ರೆಂಡಿಂಗ್
share whatsappshare facebookshare telegram
31 Aug 2026
post image

ಕಾರ್ಕಳ: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಕಾರ್ಕಳ ಶಾಖೆಯ ಸ್ವರ್ಣ ಸಂಭ್ರಮದ ಅಂಗವಾಗಿ ಕಾರ್ಕಳ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಡಾ. ಟಿ.ಎಂ. ಪೈ ರೋಟರಿ ಆಸ್ಪತ್ರೆ, ಕಾರ್ಕಳದ ನುರಿತ ವೈದ್ಯರ ತಂಡದಿಂದ ಶಿಬಿರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಪಿ. ಜಗದೀಶ್ ಆಚಾರ್ಯ, ನಿರ್ದೇಶಕರಾದ ಕೆ. ಹರೀಶ್ ಕುಮಾರ್, ಡಿ. ಭಾಸ್ಕರ ಆಚಾರ್, ಉದ್ಯಮಿ ಕಮಲಾಕ್ಷ ನಾಯಕ್, ಕಾರ್ಕಳ ತಾಲೂಕು ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಎಂ. ರಮೇಶ್ ಆಚಾರ್ ನೆಕ್ಲಾಜೆ, ಶ್ರೀ ಕಾಳಿಕಾಂಬಾ ದೇವಸ್ಥಾನ ಕಾರ್ಕಳದ ಆಡಳಿತ ಮೊಕ್ತೇಸರ ಪಿ. ರವಿ ಆಚಾರ್, ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಿಖಿತಾ, ವಿಶ್ವಕರ್ಮ ಮಹಿಳಾ ಮಂಡಳಿ ಕಾರ್ಕಳದ ಅಧ್ಯಕ್ಷೆ ಕವಿತಾ ಹರೀಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಬ್ಯಾಂಕಿನ ಗ್ರಾಹಕರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.