logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
14 Sept 2023
post image

ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವಿವೇಕ ಪ.ಪೂ. ಕಾಲೇಜು ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ12 ರಂದು ವಿವೇಕ ಪ. ಪೂ. ಕಾಲೇಜು ಕೋಟದಲ್ಲಿ ನಡೆಯಿತು.

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ಶೆಟ್ಟಿ ಇವರು ವಯೋಮಾನ ೧೪ರ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೈಸೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಕುಮಾರಿ ಸಾಕ್ಷಿ ಶೆಟ್ಟಿ ಇವರು ಕಾರ್ಕಳದ ನೀರೆ ಗ್ರಾಮದ ಶ್ರೀ. ಹರೀಶ್ ಶೆಟ್ಟಿ ಹಾಗೂ ಶ್ರೀಮತಿ ಜಯಲಕ್ಷ್ಮಿ ಶೆಟ್ಟಿ ದಂಪತಿಯ ಸುಪುತ್ರಿಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಸಿ.ಇ.ಒ ಹಾಗೂ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ದಿನೇಶ್. ಎಂ. ಕೊಡವೂರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಉಷಾ.ರಾವ್.ಯು, ಉಪ ಪ್ರಾಂಶುಪಾಲರಾದ ಶ್ರೀಮತಿ ವಾಣಿ. ಕೆ ಮತ್ತು ಶಿಕ್ಷಕ ವೃಂದದವರು ಹಾಗೂ ಪೋಷಕರು ಅಭಿನಂದಿಸಿ, ಶುಭ ಹಾರೈಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.