ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ಇವರ ಆಶ್ರಯದಲ್ಲಿ ಸೆಪ್ಟೆಂಬರ್ 15ರ ರವಿವಾರದಂದು ಮರಾಠಿ ಸಮ್ಮಿಲನ-2024 ನಡೆಯಲಿದ್ದು, ಈ ಸಂದರ್ಭದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಮಹಾಸಭೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪುರಸ್ಕಾರ, ನಮ್ಮ ಭಾಷೆ ನಮ್ಮ ಸಂಸ್ಕೃತಿ ವಿವಿಧ ಸ್ಪರ್ಧೆಗಳು ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಬೆಳ್ತಂಗಡಿ,ಲ| ಚಂದ್ರ ನಾಯ್ಕ್ ಕೋಟೇಶ್ವರ,ಕಂಟ್ರಾಕ್ಟರ್ ದಿನಕರ ನಾಯ್ಕ್, ಬೇಳಂಜೆ, ಲ|ಅಶೋಕ್ ನಾಯ್ಕ್ ಮುಚ್ಚೂರು ಭಾಗವಹಿಸಲಿದ್ದು,ಸಂಘದ ಅಧ್ಯಕ್ಷರಾದ ಶೇಖರ ಕಡ್ತಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ವ್ಯಾಪ್ತಿಯಲ್ಲಿ ವಿಶೇಷ ಸಾಧನೆ ಮಾಡಿದ ಏಳು ಸಾಧಕ ಪ್ರಶಸ್ತಿ ಪ್ರದಾನ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ, ಭಕ್ತಿಗಾನ ಸೌರಭ, ವಾರ್ಷಿಕ ಮಹಾಸಭೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು,ಸಂಘದ ಸದಸ್ಯರಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.