logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಐ ಎ ಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ವಿಜಯನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾವಣೆ

ಟ್ರೆಂಡಿಂಗ್
share whatsappshare facebookshare telegram
1 Feb 2023
post image

ಕಾರ್ಕಳ; : ಐ ಎ ಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ವಿಜಯನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ‌ನಂತರ , 2005 ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಾತಿ ಹೊಂದಿದರು. 2006 ಬ್ಯಾಚ್ ನ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ ಕೆ.ಎ.ಎಸ್ ಸೇವೆಗೆ ಸೇರ್ಪಡೆಗೊಂಡರು.
ಬಿಜಾಪುರ ದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಯಾಗಿ ಬಳಿಕ ಐ ಎ ಎಸ್ ಪದೋನ್ನತಿ ಪಡೆದು ಬೆಂಗಳೂರಿನ ಮೇಲ್ಮನವಿ ನ್ಯಾಯಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.