logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ನಾಳೆ ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಬಂಟ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಉದ್ಘಾಟನೆ ಸಮಾರಂಭ

ಟ್ರೆಂಡಿಂಗ್
share whatsappshare facebookshare telegram
25 Jan 2022
post image

ಕಾರ್ಕಳ: ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಬಂಟ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಉದ್ಘಾಟನೆ ಸಮಾರಂಭ ಜ.26ರಂದು ಪ್ರೈಮ್‌ ಮಾಲ್‌ನ್‌ 1ನೇ ಮಹಡಿಯಲ್ಲಿ ಕಚೇರಿ ಉದ್ಘಾಟನೆಗೊಳ್ಳಲಿದ್ದು, ಉಷಾ ಸೆಲೆಬ್ರೇಷನ್‌ ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 10:30ಕ್ಕೆ ಉದ್ಘಾಟನಾ ಸಮಾರಂಭ ಜರಗಲಿದೆ.

ಕೇಮಾರು ಶ್ರೀ ಸಾಂದೀಪನೀ ಸಾಧನಾಶ್ರಮದ ಶ್ರೀ ಈಶವಿಠಲ ದಾಸ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಿರುವರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ ಕುಮಾರ್‌ ರೈ ಬ್ಯಾಂಕ್‌ ಉದ್ಘಾಟಿಸಲಿರುವರು. ಎಂಆರ್‌ಜಿ ಗ್ರೂಪ್ಸ್‌ ಅಧ್ಯಕ್ಷ ಬಂಜಾರ ಪ್ರಕಾಶ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆಳ್ವಾಸ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ. ಎಂ. ಮೋಹನ್‌ ಆಳ್ವ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಉದಯ ಶೆಟ್ಟಿ ಮುನಿಯಾಲು ಅಧ್ಯಕ್ಷತೆ ವಹಿಸಲಿರುವರು. ಉಪಾಧ್ಯಕ್ಷ ಕೆ. ಮಂಜುನಾಥ ಶೆಟ್ಟಿ ಬೈಲೂರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಶೋರ್‌ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.