



ಉಡುಪಿ: ರಾಷ್ಟ್ರೀಕೃತ ಬ್ಯಾಂಕ್ ಗಳಂತೆಯೆ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಿರುವ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಸಂಪೂರ್ಣ ಹವಾನಿಯಂತ್ರಿತ ನೂತನ ಶಾಖೆಯು ಜ.26 ರಂದು ಕಾರ್ಕಳದ ಅನಂತಶಯನ ರಸ್ತೆಯ ವಿಕಾಸ ಟವರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯನ್ನು ಜ.26 ರಂದು ಸಂಜೆ 4 ಗಂಟೆಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಮೂಡುಬಿದ್ರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ, ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.