logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಅಹ್ವಾನ - ಅರ್ಜಿ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನ.

ಟ್ರೆಂಡಿಂಗ್
share whatsappshare facebookshare telegram
5 Apr 2024
post image

ಗಣಿತನಗರ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ನೀಡಲಾಗುತ್ತಿದ್ದು, ಕಳೆದ ಶೈಕ್ಷಣಿಕ ವರ್ಷದಿಂದ ಈ ಉಚಿತ ಶಿಕ್ಷಣವನ್ನು ಕಾಲೇಜು ವಿಭಾಗದಲ್ಲಿ ವಾಣಿಜ್ಯ ವಿಭಾಗಕ್ಕೂ ವಿಸ್ತರಿಸಲಾಗಿದೆ.

ಪ್ರಸ್ತುತ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ ಮತ್ತು ಸ್ಟ್ಯಾಟಿಸ್ಟಿಕ್ಸ್ ಅಥವಾ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ ಮತ್ತು ಕಂಪ್ಯೂಟರ್ ಸೈನ್ಸ್ ಸಂಯೋಜನೆಯಿದ್ದು, 2024- 25ನೇ ಶೈಕ್ಷಣಿಕ ಸಾಲಿಗೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಸಿ.ಬಿಎಸ್.ಇ / ಐ.ಸಿ.ಎಸ್.ಇ ಬೋರ್ಡ್‍ನಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ಕಾರ್ಕಳ ತಾಲೂಕಿನ ವಿದ್ಯಾರ್ಥಿಗಳು ಈ ಉಚಿತ ಶಿಕ್ಷಣದ ಸದುಪಯೋಗ ಪಡಿಸಿಕೊಳ್ಳಬಹುದು ಹಾಗೂ ಈ ಮೇಲಿನ ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅಥವಾ ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ನೊಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.