logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಜ್ಞಾನಸುಧಾ: ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ

ಟ್ರೆಂಡಿಂಗ್
share whatsappshare facebookshare telegram
6 Dec 2023
post image

ಕಾರ್ಕಳ: ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಹಾಗೂ ಕೈಗಾರಿಕಾ ಭೇಟಿಯನ್ನು ಡಿಸೆಂಬರ್ 2ರಂದು ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ ಇವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿತ್ತು. ಕಾರ್ಕಳ ಸಮೀಪದ ಮಿಯಾರಿನ ಕೆನರಾ ಬ್ಯಾಂಕ್ ಪ್ರಾಯೋಜಿತ ಸಿ.ಇ.ಕಾಮತ್ ಇನ್ಸ್ಟಿಟ್ಯೂಟ್ ಫಾರ್ ಆರ್ಟಿಸಾನ್ಸ್ ಮತ್ತು ಬನ್ನಡ್ಕದಲ್ಲಿರುವ ಎಸ್.ಕೆ.ಎಫ್. ಎಲಿಕ್ಸರ್ ಇಂಡಿಯಾ ಪ್ರೈ.ಲಿ.ಗಳಿಗೆ ವಿದ್ಯಾರ್ಥಿಗಳು ಭೇಟಿ ಇತ್ತು ತರಬೇತಿ, ಉತ್ಪನ್ನ, ಮಾರುಕಟ್ಟೆ ವ್ಯವಸ್ಥೆಯ ಕುರಿತಂತೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭ ಎಸ್.ಕೆ.ಎಫ್.ನ ಸಂಸ್ಥಾಪಕ ಡಾ| ಜಿ.ರಾಮಕೃಷ್ಣ ಆಚಾರ್, ಸಂಸ್ಥೆಯ ಎಚ್.ಆರ್ ಶ್ರೀಮತಿ ಸುಮನಾ ಹಾಗೂ ಸಿ.ಇ.ಕಾಮತ್ ಇನ್ಸ್ಟಿಟ್ಯೂಟ್ ಫಾರ್ ಆರ್ಟಿಸಾನ್ಸ್ ಇದರ ನಿರ್ದೇಶಕಿ ಶ್ರೀಮತಿ ಸವಿತಾ ಎಸ್.ನಾಯಕ್ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಸಂಗೀತಾ ಕುಲಾಲ್, ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಮಿತ್ರಾ, ಸಂಖ್ಯಾಶಾಸ್ತ್ರ ಉಪನ್ಯಾಸಕ ಲೆ.ಮಂಜುನಾಥ್ ಮುದೂರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.