



ಕಾರ್ಕಳ: ಕನ್ನಡ ರಾಜ್ಯೋತ್ಸವ ಸಂಭ್ರಮ ಪ್ರಯುಕ್ತ ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪತ್ತೋoಜಿಕಟ್ಟೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವಿದ್ಯಾರ್ಥಿಗಳಿಗೆ ಸೌತ್ ಕೆನರಾ ಫೋಟೋಗ್ರಾಫರ್ ಎಸೋಸಿಯೇಷನ್ ಇವರ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಲಾವಿದ ಹಾಗೂ ರಂಗಕರ್ಮಿ ಶ್ರೀಯುತ ಚಂದ್ರನಾಥ ಬಜೆಗೋಳಿ ದಿಕ್ಸೂಚಿ ಭಾಷಣ ಮಾಡಿದ ಅವರು ಕನ್ನಡವನ್ನು ಉಳಿಸಿ ಹಾಗೂ ಬೆಳೆಸಿ ಕೇವಲ ಸಭೆ ಸಮಾರಂಭಗಳಲ್ಲಿ ಭಾಷಣಕ್ಕೆ ಸೀಮಿತವಾಗಿರದೆ ಕರ್ನಾಟಕದ ಎಲ್ಲ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಎಲ್ಲಾ ಕಡೆ ಕನ್ನಡವನ್ನು ಕಡ್ಡಾಯ ಮಾಡಿದರೆ ಮಾತ್ರ ಕನ್ನಡ ಉಳಿಸಲು ಸಾಧ್ಯ ವಾದಿತು ಎಂದು ಹೇಳಿದರು. ನಂತರ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಲಾಯಿತು ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.
ನಂತರ ಮಾತನಾಡಿದ ಕಾರ್ಕಳ s.k.p.a ವಲಯದ ಅಧ್ಯಕ್ಷರಾದ ಟಿ ವಿ . ಸುಶೀಲ್ ಕುಮಾರ್ ಅವರು ನಾವು ಪ್ರತಿ ವರ್ಷ ಕನ್ನಡ ಶಾಲೆಯ ಪ್ರತಿಭಾವಂತ ಮಕ್ಕಳಿಗೆ ಗುರುತಿಸಿ ಬಹುಮಾನವನ್ನು ವಿತರಿಸಿ ಅವರಿಗೆ ಪ್ರೋತ್ಸಾಹಿಸುತ್ತಾ ಬರುತ್ತಿದ್ದೇವೆ, ಈ ಕಾರ್ಯಕ್ರಮವನ್ನು ಪ್ರತಿ ವರ್ಷ ಮುಂದುವರಿಸುತ್ತಾ ಹೋಗುತ್ತಿದ್ದೇವೆ ಎಂದು ಹೇಳಿದರು. ನಂತರ ಶಾಲಾ ಮಕ್ಕಳಿಂದ ಕನ್ನಡ ನಾಡು ನುಡಿಯ ಕುರಿತಾದ ನೃತ್ಯವನ್ನು ಪ್ರದರ್ಶಿಸಿದರು. ಎಸ್ ಕೆ ಪಿ ಯ ಸಹಕಾರಿ ಸಂಘದ ನಿರ್ದೇಶಕರಾದ ದತ್ತಾತ್ರೇಯ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶಾಂತಿ ಅಲ್ಮೇಡ ಅತಿಥಿಗಳನ್ನು ಸ್ವಾಗತಿಸಿದರು, ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಈಶ್ವರ ಕುಂಟಾಡಿ, ಶ್ರೀಮತಿ ಹರ್ಷಿಣಿ, ಕಾರ್ಯದರ್ಶಿ ಪ್ರಸನ್ನ ಹೆಗಡೆ, ಮುಂತಾದವರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.