logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಮನೆಯವರಿಗೆ ಬೆದರಿಸಿ ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
26 Sept 2022
post image

ಕಾರ್ಕಳ : ಮನೆಯವರಿಗೆ ಬೆದರಿಸಿ ಮನೆಯ ಹೊರಗಡೆಯ ಮಾಡಿಗೆ ನೇಣುಬಿಗಿದುಕೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪೆರ್ವಾಜೆ ಎಂಬಲ್ಲಿ ಸೆ.25ರಂದು ಸಂಜೆ ನಡೆದಿದೆ. ಮೃತರನ್ನು ಪೆರ್ವಾಜೆ ನಿವಾಸಿ 63ವರ್ಷದ ನಾರಾಯಣ ದೇವಾಡಿಗ ಎಂದು ಗುರುತಿಸಲಾಗಿದೆ‌. ಇವರು ಅವಿವಾಹಿತರಾಗಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಅಲ್ಲದೆ, ಮಾನಸಿಕ ರೋಗದಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಸಂಜೆ ಮನೆಯವರಿಗೆ ಬೆದರಿಸಿ, ಮನೆಯ ಹೊರಗಿನ ಮಾಡಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.