logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಮಾನಸಿಕ ಅಸ್ವಸ್ಥ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
8 Sept 2023
post image

ಕಾರ್ಕಳ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆಯಲ್ಲಿ ನಡೆದಿದೆ.

ಜೋಡುಕಟ್ಟೆ ನಿವಾಸಿ ಸುರೇಶ ಪೂಜಾರಿ (48 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಉಡುಪಿಯ ಬಾಳಿಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸೆ.7ರಂದು ಬೆಳಿಗ್ಗೆ ಸುರೇಶ್ ತಾಯಿ ಮನೆಯಿಂದ ಹೊರಗಡೆ ಕೆಲಸ ಮಾಡುತ್ತಿದ್ದ ವೇಳೆ ಸುರೇಶ್ ಅವರು ಮನೆಯ ದೇವರ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರೇಶ್ ತನಗಿರುವ ಮಾನಸಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.