


ಕಾರ್ಕಳ: ಪತ್ರಕರ್ತ, ಸಾಹಿತಿ ದಿ. ಡಾ. ಶೇಖರ್ ಅಜೆಕಾರ್ ಅವರ ಸವಿನೆನಪಿಗಾಗಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುತ್ತಿರುವ 2025-26ನೇ ಸಾಲಿನ 'ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ'ಗೆ ಹಿರಿಯ ಪತ್ರಕರ್ತರು ಹಾಗೂ ಡಂಗುರ ವಾರ ಪತ್ರಿಕೆಯ ಸಂಪಾದಕ ಕುಂಟಾಡಿ ದಯಾನಂದ ಪೈ ಆಯ್ಕೆಯಾಗಿದ್ದಾರೆ.
ಕಾರ್ಕಳ ಸಾಣೂರು ರಾಜೇಶ್ವರಿ ಕಾಲೇಜಿನಲ್ಲಿ ಆಗಸ್ಟ್ 6ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ. ಎಂ. ಮೋಹನ್ ಆಳ್ವರವರು ಕುಂಟಾಡಿ ದಯಾನಂದ ಪೈಯವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಕ್ವಾರಿ ಮತ್ತು ಕ್ರಷರ್ ಅಸೋಸಿಯೇಷನ್‌ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಸಾಣೂರು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸಾಣೂರು ಈಶ ವ್ಯಾಸಂ ಟ್ರಸ್ಟ್ ಅಧ್ಯಕ್ಷ ಶ್ರೀರಾಮ್ ಭಟ್, ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ ಕುರ್ಯ, ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚರಿಪೇಟೆ ಮತ್ತು ಕೋಶಾಧಿಕಾರಿ ಸತೀಶ್ ಎಚ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.