



ಬೈಲೂರು: ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಳ್ಳಬೇಕು. ವಿದ್ಯಾವಂತ ಮತ್ತು ಸಂಸ್ಕಾರವಂತರಾಗಬೇಕು ಎಂದು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ "ಪರಶುರಾಮ"ನಾಟಕ ಪ್ರದರ್ಶನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ವಿ.ಟಿ. ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀ ಕೆ.ಪಿ.ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶಕ್ಕೆ ಮತ್ತು ಸಮಾಜಕ್ಕೆ ಉತ್ತಮ ಪ್ರಜೆಗಳಾಗುವಂತೆ ಕರೆ ನೀಡಿದರು. ಹಿರ್ಗಾನ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ.ಗಣನಾಥ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಬಿಲ್ಲವ ಯುವ ಬ್ರಿಗೇಡ್ ನ ಅಧ್ಯಕ್ಷ ಶ್ರೀ ಭರತ್ ಅಂಚನ್, ಖ್ಯಾತ ರಂಗನಿರ್ದೇಶಕ ಡಾ.ಜೀವನ್ ರಾಂ ಸುಳ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮೇಲ್ವಿಚಾರಕರಾದ ಶ್ರೀಮತಿ ಸೌಮ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್,ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್,ಆದರ್ಶ ಎಂ ಕೆ, ಉಪನ್ಯಾಸಕ ವೃಂದದವರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.
ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಲೋಹಿತ್ ಎಸ್ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.