



ಕಾರ್ಕಳ:ಪರಶುರಾಮ ಮೂರ್ತಿ ನಕಲಿಯಾಗಿದ್ದು ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಒತ್ತಡದಿಂದ ತಾತ್ಕಾಲಿಕ ವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ, ಈಗ ಮೂರ್ತಿ ಯ ಮೇಲ್ಭಾಗದಲ್ಲಿನ ಕೈ ತಲೆ ಭಾಗಗಳನ್ನು ಬದಲಾವಣೆ ಮಾಡಬೆಕಾಗುತ್ತದೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು ಅವರು ಕಾರ್ಕಳ ಬೈಲೂರು ಪರಶುರಾಮ ಥೀಮ್ ಪಾರ್ಕ್ನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹೆಬ್ಬಾಳ್ಕರ್ : ಪರಶುರಾಮ ಮೂರ್ತಿ ಬಳಿ ಚಪ್ಪಲಿ ಧರಿಸಿಕೊಂಡು ಆಗಮಿಸಿದ ನಿರ್ಮಿತಿ ಕೆಂದ್ರದ ಅಧಿಕಾರಿ ಸಚಿನ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ , ಅಪರಜಿಲ್ಲಾಧಿಕಾರಿ ಮಮತಾದೇವಿ ಜಿ ಎಸ್ ಅವರನ್ನು ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ತರಾಟೆಗೆ ತೆಗೆದುಕೊಂಡರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.