


ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ (ಜು.12) ರಾತ್ರಿ ಸಂಭವಿಸಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ (ನಂದಳಿಕೆ) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ರವಿವಾರ ಸಂಜೆ ಕಾರ್ಕಳದಿಂದ ಸುಮಾರು 7.30ರ ವೇಳೆಗೆ ಸ್ಕೂಟಿಯಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ, ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಇಂಡಿಕೇಟರ್ ನೀಡಿ ಯೂ-ಟರ್ನ್ ಪಡೆಯಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಅತಿ ವೇಗವಾಗಿ ಬಂದ ಬೈಕ್ ಸ್ಕೂಟಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶಿವಪ್ರಸಾದ್ ರಾವ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗಾಯಗಳ ತೀವ್ರತೆಯ ಕಾರಣ ಚಿಕಿತ್ಸೆಯು ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.