



ಕಾರ್ಕಳ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ ಸ್ವರಕ್ಷಾ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ತಿಕ್ ಎಸ್ ಕಟೀಲ್ ಇವರು ಸ್ವರಕ್ಷಾ ತರಬೇತಿಯನ್ನು ನಡೆಸಿಕೊಟ್ಟರು. ಒಬ್ಬಂಟಿಯಾಗಿ ಸಾಗುವಾಗ ನಡೆಯುವ ಆಕ್ರಮಣ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಸಮಯಪ್ರಜ್ಷೆಯೊಂದಿಗೆ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಅವಶ್ಯಕತೆ ಇದೆ. ಎದುರಾಳಿ ವ್ಯಕ್ತಿಯು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಅವನ ದೇಹದ ದುರ್ಬಲ ಭಾಗಗಳಿಗೆ ಯಾವ ರೀತಿ ಆಕ್ರಮಣ ಮಾಡಿ ನಮ್ಮನ್ನ ನಾವು ರಕ್ಷಿಸಿಕೊಳ್ಳಬಹುದು ಎಂಬುದನ್ನು ಪ್ರಾಯೋಗಿಕವಾಗಿ ಕರಾಟೆಪಟು ಕಾರ್ತಿಕ್ ಎಸ್ ಕಟೀಲ್ ತೋರಿಸಿಕೊಟ್ಟರು. ಈ ಸಂದರ್ಭದಲ್ಲಿ ಅವರ ಅಮ್ಮ ಶ್ರೀಮತಿ ಶಾಂತಲತಾ ಹೆಣ್ಣು ಮಕ್ಕಳ ಜವಬ್ದಾರಿಗಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ವಿಜಯ್ ಕುಮಾರ್ ಶೆಟ್ಟಿ ಕರ‍್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.