



ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಉಡುಪಿ ಜಿಲ್ಲೆ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ, ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯು ಸೆ.13 ರಂದು ಕಾರ್ಕಳ ಗಾಂಧಿ ಮೈದಾನ ಕ್ರೀಡಾಂಗಣದಲ್ಲಿ ನಡೆಯಿತು.
ವಯೋಮಾನ ೧೭ರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಸುಮುಖ್ ರಾಜ್ (೧೦ನೇ ತರಗತಿ), ಶೋಧನ್ ವರ್ಮ (೯ನೇ ತರಗತಿ) ಹಾಗೂ ವಯೋಮಾನ ೧೪ರ ವಿಭಾಗದಲ್ಲಿ ಸನತ್ ಎನ್ ನಾಯಕ್ (೮ನೇ ತರಗತಿ), ಪ್ರದ್ಯೋತ್ ಪ್ರಮಲ್ (೭ನೇ ತರಗತಿ) ಇವರು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಸಿ.ಇ.ಒ ಹಾಗೂ ಕಾರ್ಕಳ ಜ್ಞಾನಸುಧಾ ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ದಿನೇಶ್. ಎಂ. ಕೊಡವೂರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಉಷಾ ರಾವ್ ಯು, ಉಪ ಪ್ರಾಂಶುಪಾಲರಾದ ಶ್ರೀಮತಿ ವಾಣ . ಕೆ, ಶಿಕ್ಷಕ ವೃಂದದವರು ಹಾಗೂ ಪೋಷಕರು ಅಭಿನಂದಿಸಿ, ಶುಭ ಹಾರೈಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.