logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
29 Apr 2024
post image

ಕಾರ್ಕಳ: ನಗರದ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಅನಾರೋಗ್ಯದ ಕಾರಣ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಠಾಣಾ ವ್ಯಾಪ್ತಿಯ ನಿವಾಸಿ ದರ್ಣಪ್ಪ (61) ಆತ್ಮಹತ್ಯೆ ಮಾಡಿಕೊಂಡವರು. ಸುಮಾರು 2 ವರ್ಷಗಳ ಹಿಂದೆ ರಸ್ತೆ ಅಪಘಾತದಿಂದ ದರ್ಣಪ್ಪ ಅವರ ಎಡಗೈಗೆ ಉಂಟಾದ ಗಾಯದ ನೋವು ಆಗಾಗ ಬರುತ್ತಿರುವುದರಿಂದ ಕೆಲಸ ಮಾಡಲು ಕಷ್ಟವಾಗುತ್ತಿತ್ತು. ಇದರಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಏ.24 ರಂದು ಸಂಜೆ ವೇಳೆ ಕೀಟನಾಶಕವನ್ನು ಕುಡಿದು ಅಸ್ವಸ್ಥಗೊಂಡಿದ್ದರು.

ಈ ವೇಳೆ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಸ್ಪಂದಿಸದೇ ನಿನ್ನೆ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.