logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಚುನಾವಣೆ

ಟ್ರೆಂಡಿಂಗ್
share whatsappshare facebookshare telegram
19 Jul 2023
post image

     

ಕಾರ್ಕಳ:  ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಆಚಾರ್ಯ ಆಯ್ಕೆಯಾಗಿದ್ದಾಾರೆ. ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು.

    ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನಾರ್ ರಚನೆ ಪ್ರಕ್ರೀಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಬುಧವಾರ ಜರುಗಿತು.

 ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ  ರಾಜೇಶ್  ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಕೋಶಾಧಿಕಾರಿ ಉಮೇಶ್  ಮಾರ್ಪಳ್ಳಿ , ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. 

ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆಕಾರ್ಯದರ್ಶಿಯಾಗಿ ವಾಸುದೇವ ಭಟ್, ಕ್ರೀಡಾ ಕಾರ್ಯದರ್ಶಿ ರಾಂ ಅಜೆಕಾರು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಹರಿಪ್ರಸಾದ್ ನಂದಳಿಕೆ ಆಯ್ಕೆಗೊಂಡರು. ಜಿಲ್ಲಾಾ ಪಾಧ್ಯಕ್ಷ  ಆರ್. ಬಿ ಜಗದೀಶ್, ಜಿಲ್ಲಾಾ ಸಮಿತಿ ಪ್ರತಿನಿಧಿ  ಉದಯ್ ಮುಂಡ್ಕೂರ್ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.