



ಕಾರ್ಕಳ: ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಸ್ಕೂಟರ್ ಸವಾರ ಸಚ್ಚೇರಿಪೇಟೆಯ ನಿವಾಸಿ ಗೋಪಾಲಕೃಷ್ಣ (38) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಮುಂಡ್ಕೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ತರಕಾರಿ ಸಾಗಾಟದ ಟೆಂಪೊವೊಂದು, ವಿರುದ್ಧ ದಿಕ್ಕಿನಲ್ಲಿ ಬಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಗೋಪಾಲಕೃಷ್ಣ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದು, ಕಿನ್ನಿಗೋಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ವೈದ್ಯರು ಪರೀಕ್ಷಿಸಿ, ಗೋಪಾಲಕೃಷ್ಣ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.