logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕಾರ್ಕಳ: ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
26 Oct 2026
post image

ಕಾರ್ಕಳ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ಬೆಳ್ಮಣ್‌–ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಅ.24ರಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ತಾಲೂಕಿನ ಪೆರ್ನಾಲ್ ಗ್ರಾಮದ ಕೇಶವ ಆಚಾರ್ಯ ಗಾಯಗೊಂಡವರು. ಇವರು ಅ.24ರಂದು ಬೆಳಗ್ಗೆ 7.50ಕ್ಕೆ ತಮ್ಮ ಸ್ಪ್ಲೆಂಡರ್ ಬೈಕ್‌ (ಕೆಎ-20-ಡಬ್ಲ್ಯು-452)ನಲ್ಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು.

ಬೆಳ್ಮಣ್ ಗ್ರಾಮದ ಜಂತ್ರ ಬಸ್ ನಿಲ್ದಾಣದಿಂದ ಸುಮಾರು 200 ಮೀಟರ್ ಹಿಂದೆ ಬೆಳಗ್ಗೆ 8 ಗಂಟೆಯ ವೇಳೆಗೆ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ ಎನ್ನಲಾಗಿದೆ.

ಗಾಯಗೊಂಡ ಕೇಶವ ಆಚಾರ್ಯ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಣೆಯ ಬಲಭಾಗಕ್ಕೆ ರಕ್ತಗಾಯ, ಬಲಭುಜಕ್ಕೆ ತರಚಿದ ಗಾಯ ಹಾಗೂ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಬಳಿಕ ಉಡುಪಿ ಜಿಲ್ಲಾ ಆಸ್ಪತ್ರೆಯ ಮೂಲಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.