


ಕಾರ್ಕಳ: ಕಾರ್ಕಳದ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಯೋಜನಾ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿರುವುದು ಸಂತಸದ ವಿಚಾರವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ನೂತನ ಆದೇಶ ಹೊರಡಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕಾರ್ಕಳದ ಜನತೆಯ ಪರವಾಗಿ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ ಸಲ್ಲಿಸಿದ್ದಾರೆ.
ಇಲ್ಲಿಯವರೆಗೆ ಏಕ ವಿನ್ಯಾಸ ಅನುಮತಿ ಹಾಗೂ ಭೂ ಪರಿವರ್ತನೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಕಾಪು ಯೋಜನಾ ಪ್ರಾಧಿಕಾರ ಮತ್ತು ಉಡುಪಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಕಾರ್ಕಳದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಅಗತ್ಯ ದಾಖಲೆಗಳಿಗಾಗಿ ದೂರದ ಊರುಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ ಎಂದು ಅವರು ತಿಳಿಸಿದ್ದಾರೆ.
ಯೋಜನಾ ಪ್ರಾಧಿಕಾರದ ಮಂಜೂರಾತಿಯಿಂದ ಕಾರ್ಕಳದಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಹೊಸ ಚೈತನ್ಯ ದೊರೆಯಲಿದೆ. ಇದರೊಂದಿಗೆ ಅಭಿವೃದ್ಧಿ ಚಟುವಟಿಕೆಗಳು ವೇಗ ಪಡೆದುಕೊಳ್ಳಲಿದ್ದು, ಉದ್ಯೋಗಾವಕಾಶಗಳ ಸೃಷ್ಟಿಗೂ ಸಹಕಾರಿಯಾಗಲಿದೆ ಎಂದು ಉದಯ ಶೆಟ್ಟಿ ಮುನಿಯಾಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.