



ಬೆಂಗಳೂರು: ರಾಜ್ಯದಲ್ಲಿ ಗೂಂಡಾಗಿರಿ ನಡೆಸಿದ್ದ ಎಂಇಎಸ್ ಸಂಘನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಡಿ.31ರ ಕರ್ನಾಟಕ ಬಂದ್ ಅನ್ನು ಮುಂದೂಡಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವಾಜ ಬೊಮ್ಮಾಯಿ ಜೊತೆ ನಡೆದ ಸಭೆಯ ಬಳಿಕ ಮಾಹಿತಿ ನೀಡಿರುವ ವಾಟಾಳ್ ನಾಗರಾಜ್, ನಾಳೆಯ ಕರ್ನಾಟಕ ಬಂದ್ ಮುಂದೂಡಲು ನಿರ್ಧಾರ ಮಾಡಲಾಗಿದೆ. ಎಂಇಎಸ್ ಸಂಘಟನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ ಹಿನ್ನೆಲೆ ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.