



ಬೆಂಗಳೂರು: ಗ್ಯಾರಂಟಿ ಜಾರಿಯ ಬೆನ್ನಲ್ಲೇ ವಿದ್ಯುತ್ ದರ ಏರಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಇದೀಗ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಜೂನ್ 22 ರಂದು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದೆ.
ವಿದ್ಯುತ್ ದರ ಏರಿಕೆಯ ಬಗ್ಗೆ ಆಕ್ರೋಶಗೊಂಡಿದ್ದ ಕೆಸಿಸಿಐ, ನಿರ್ಧಾರವನ್ನು ಹಿಂಪಡೆಯುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಜೂ.10 ರಿಂದ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು.
ಒಂದು ವಾರ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸದ ಹಿನ್ನೆಲೆ ಕೆಸಿಸಿಐ ಜೂ.22 ರಂದು ಕರ್ನಾಟಕ ಬಂದ್ ನಡೆಸಲು ಮುಂದಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.