



ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆ (Electricity Price Hike) ವಿರೋಧಿಸಿ ಇಂದು (ಜೂ.22) ಮುಷ್ಕರ ಮಾಡುವುದಾಗಿ ಘೋಷಣೆ ಮಾಡಿತ್ತು. ಹಾಗಾಗಿ ಜನಸಾಮಾನ್ಯರಿಗೆ ಇಂದು ತೊಂದರೆಯಾಗುವ ಸಂಭವವಿದೆ.
ಹಾಗಾಗಿ ಗುರುವಾರ ಅಂದರೆ ಇಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ.
ಅಗತ್ಯ ಸೇವೆ, ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ, ಒಂದು ದಿನ ವ್ಯಾಪಾರ ಸಂಸ್ಥೆಗಳು ನಷ್ಟ ಅನಭವಿಸುತ್ತದೆ. ಆದರೆ ಮುಖ್ಯವಾದ ವಿಷಯವೇನೆಂದರೆ ವಿದ್ಯುತ್ ದರ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ ಎಂಬುದಾಗಿ ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಹೇಳಿದ್ದಾರೆ.
ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ಚಿತ್ರದುರ್ಗ, ಕಲ್ಯಾಣ್ ಕಾಮತಕ, ಹಾವೇರಿ, ಕಾಮತಕ ಜಿಲ್ಲಾ ಚೇಂಬರ್‌ಗಳು, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಇತರೆ ಉದ್ಯಮ ಸಂಘಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.