logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ

ಟ್ರೆಂಡಿಂಗ್
share whatsappshare facebookshare telegram
21 May 2023
post image

ಬೆಂಗಳೂರು : ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಇದ್ದರು. ಸದ್ಯ ಇವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದರು. ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳ್ಳುವ ಮುನ್ನ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದರು. ಇವರು 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.