



ನವದೆಹಲಿ: ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ (Praveen Sood) ನೇಮಕಗೊಂಡಿದ್ದಾರೆ.
ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ಸಚಿವ ಸಂಪುಟಕ್ಕೆ ಶಿಫಾರಸು ಮಾಡಿತ್ತು. ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ. ಮೇ 26 ಕ್ಕೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕರಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.