



ಬೆಂಗಳೂರು : ಕೆಎಂಎಫ್ ನೌಕರರಿಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನಂದಿನಿ ಹಾಲು ಉತ್ಪನ್ನಗಳ ವ್ಯವಸ್ಥಾಪಕ ನಿರ್ದೇಶಕರಾಗಿರುವ ಅರ್ಜಿದಾರರು ಕೆಎಂಎಫ್ ಘಟಕದಡಿ ಬರುತ್ತಾರೆ. ಅದು ಸಾರ್ವಜನಿಕ ನಿಬಂಧನೆಗೆ ಒಳಪಟ್ಟಿದೆ. ಕೆಎಂಎಫ್ ಸಾರ್ವಜನಿಕ ಸಂಸ್ಥೆಯಾಗಿರುವುದರಿಂದ ಅದರ ಉದ್ಯೋಗಿಗಳೂ ಸರ್ಕಾರಿ ನೌಕರರೆಂದು ಪರಿಗಣಿಸಲ್ಪಡುತ್ತಾರೆ. ಆದ್ದರಿಂದ, ಅವರೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಪ್ರಕರಣ ರದ್ದು ಕೋರಿ ನಂದಿನಿ ಹಾಲು ಉತ್ಪನ್ನಗಳ ವ್ಯವಸ್ಥಾಪಕ ನಿರ್ದೇಶಕ ವಿ. ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.