logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್: ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಟ್ರೆಂಡಿಂಗ್
share whatsappshare facebookshare telegram
21 Nov 2023
post image

ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಫ್‌ನ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಎಲ್ಲಾ ಆರು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಪಡೆದುಕೊಂಡಿತು. ಪುರುಷರ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಹಾಗೂ ಮಹಿಳಾ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಶಿವಾನಂದ ಪಡೆದುಕೊಂಡರು. ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪಡೆದುಕೊಂಡರು. ಕ್ರೀಡಾಪಟುಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.